ಕಾರವಾರ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ಕೆಲವು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಮೂರ್ನಾಲ್ಕು ದಿನದಿಂದ ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಮೇತ ಮಳೆಯಾಗುತ್ತಿದೆ. ಶಿರಸಿ, ಕುಮಟಾ, ಕಾರವಾರ, ಮುಂಡಗೋಡ ಭಾಗದಲ್ಲಿ ಭಾರಿ ಮಳೆಯಾಗಿದೆ. ಅಕ್ಟೋಬರ್ 20ರ ವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.