ಜಿಲ್ಲೆ

ಬೆಂಗಳೂರಿನ ಹಲವೆಡೆ ತುಂತುರು‌ ಮಳೆ ಆರಂಭ; ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಇಂದು ನಗರದ ಹಲವೆಡೆ ಮಳೆ ಶುರುವಾಗಿದೆ. ಬಿಸಿಲಿನಿಂದ ತತ್ತರಿಸಿದ್ದ ಸಿಲಿಕಾನ್​ ಸಿಟಿ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.

ಕಾರ್ಪೊರೇಷನ್, ಟೌನ್‌ಹಾಲ್, ಕೆ.ಆರ್‌.ಮಾರ್ಕೆಟ್‌, ಮಲ್ಲೇಶ್ವರಂ, ಯಶವಂತಪುರ ಸೇರಿ ಹಲವೆಡೆ ಮಳೆ ಶುರುವಾಗಿದ್ದು, ಶಕೆ ಅನುಭವದಿಂದ ಬೆಸತ್ತಿದ್ದ ಜನರಿಗೆ ಇದೀಗ ವರುಣ ತಂಪೆರೆದಿದ್ದು, ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡಿದ್ದು, ಮಳೆ ಹಿನ್ನಲೆ ಅಂಡರ್ ಪಾಸ್, ಫ್ಲೈ ಓವರ್ ಕೆಳಗಡೆ ಜನರು ಆಸರೆ ಪಡೆದಿದ್ದಾರೆ.

ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಹಿನ್ನೆಲೆ ನಾಳೆಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ನಾಳೆಯಿಂದ ಐದು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜೂನ್ 3ರ ಹೊತ್ತಿಗೆ ಮುಂಗಾರು ಉತ್ತರ ಒಳನಾಡು ಪ್ರವೇಶಿಸುವ ಸಾಧ್ಯತೆ ಇದೆ.