ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಮಳೆ ನೀರು ಕೊಯ್ಲು ಮಾಹಿತಿ ಕಾರ್ಯಕ್ರಮದಲ್ಲಿ ಜೋಸೆಫ್ ಸಂತೆಕಟ್ಟೆ ಅವರನ್ನು ಸನ್ಮಾನಿಸಲಾಯಿತು 
ಜಿಲ್ಲೆ

ಮಳೆ ನೀರು ಕೊಯ್ಲು ಮಾಹಿತಿ

ಇಂದಿರಾ ಎನ್ ಕೆ

ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಆಶ್ರಯದಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಮಳೆ ನೀರು ಕೊಯ್ಲು ಮಾಹಿತಿ ಕಾರ್ಯಕ್ರಮ ಮಂಗಳವಾರ ನಡೆಯಿತು.

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್.ತಾಂಡೇಲ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಜೋಸೆಫ್ ಸಂತೆಕಟ್ಟೆ ಮಳೆ ನೀರು ಕೊಯ್ಲು ಪ್ರಾತ್ಯಕ್ಷಿಕೆ ನೀಡಿ ಮಾಹಿತಿ ನೀಡಿದರು. ಜೋಸೆಫ್ ಸಂತೆಕಟ್ಟೆ ಅವರನ್ನು ಗೌರವಿಸಲಾಯಿತು. ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ದೇವಾನಂದ, ಅಸಿಸ್ಟೆಂಟ್ ಗವರ್ನರ್ ಡಾ.ರಾಜೇಂದ್ರ ಶೆಟ್ಟಿ, ಜೋನಲ್ ಲೆಫ್ಟಿನೆಂಟ್ ಪ್ರದೀಪ ಡಿ.ಕೆ., ಉಷಾ ದೇವಾನಂದ, ಗಂಗೊಳ್ಳಿ ರೋಟರಿ ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ, ಗಂಗೊಳ್ಳಿ ರೋಟರಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.