ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದ ಬಳಿ ಇರುವ ಬ್ಲಾಕ್ ಸ್ಪಾಟ್ ತೆರವುಗೊಳಿಸಲಾಗಿದ್ದು, ಶ್ರೀಕೃಷ್ಣಮಠಕ್ಕೆ ಬರುವ ಪ್ರವಾಸಿಗರು ಮತ್ತು ಭಕ್ತಾಧಿಗಳು ಘನತ್ಯಾಜ್ಯ ವಸ್ತುಗಳನ್ನು ಎಸೆದು ಹೋಗುತ್ತಿರುವುದರಿಂದ ಸ್ವಚ್ಛತೆಗಾಗಿ ನಗರಸಭಾ ವತಿಯಿಂದ ಹಸಿಕಸ, ಒಣಕಸ ವಿಂಗಡಣೆ ಮಾಡಿ ಪ್ರತ್ಯೇಕವಾಗಿ ಸಂಗ್ರಹಿಸಲು ಹಸಿರು ಮತ್ತು ನೀಲಿ ಬಣ್ಣದ ಡಸ್ಟ್ಬಿನ್ಗಳನ್ನು ಇಡಲಾಯಿತು.
ಪೌರಾಯುಕ್ತ ರಾಯಪ್ಪ ಮಾತನಾಡಿ, ಪ್ರತಿಯೊಬ್ಬ ನಾಗರಿಕರು ಘನತ್ಯಾಜ್ಯ ವಸ್ತುಗಳನ್ನು ಮೂಲದಲ್ಲಿ ವಿಂಗಡಿಸಿ ಎಲ್ಲೆಂದರಲ್ಲಿ ಬಿಸಾಡದೆ ಡಸ್ಟ್ಬಿನ್ಗಳಲ್ಲಿ ಹಾಕಿ ನಗರಸಭೆಯ ವಾಹನಕ್ಕೆ ನೀಡಿ, ಸ್ವಚ್ಛಂದ ಪರಿಸರ ನಿಮಾರ್ಣಕ್ಕೆ ಸಹಕರಿಸಬೇಕು. ಪ್ರವಾಸಿಗರು ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ಡಸ್ಟ್ಬಿನ್ಗಳಲ್ಲಿ ಹಾಕಲು ಒಬ್ಬ ಸಿಬ್ಬಂದಿ ನೇಮಕ ಮಾಡಿ ಪ್ರವಾಸಿಗರಿಗೆ ಘನತ್ಯಾಜ್ಯ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಲಾಗುತ್ತಿದೆ ಎಂದು ಹೇಳಿದರು.
ಸ್ಥಳಿಯ ಸದಸ್ಯ ಗಿರೀಶ್ ಅಂಚನ್ ಹಾಗೂ ನಗರಸಭಾ ಪರಿಸರ ಅಭಿಯಂತರೆ ಸ್ನೇಹ ಕೆ.ಎಸ್, ಆರೋಗ್ಯ ನಿರೀಕ್ಷಕಿ ಶಶಿರೇಖಾ, ಮನೋಹರ, ಸ್ಯಾನಿಟರಿ ಸೂಪರ್ವೈಸರ್ಗಳಾದ ಸುರೇಶ್ ಶೆಟ್ಟಿ, ರಾಜು, ಸುರೇಂದ್ರ, ನಾಗಾರ್ಜುನ ಉಪಸ್ಥಿತರಿದ್ದರು.