ಜಿಲ್ಲೆ

ತೋಟಗಾರಿಕೆ ಜಾಗ ಸರ್ವೆ ನಡೆಸಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಎಲ್ಲ ತೋಟಗಾರಿಕಾ ಕ್ಷೇತ್ರಗಳ ಜಾಗದ ಬಗ್ಗೆ ತುರ್ತು ಸರ್ವೆ ನಡೆಸಿ ಒತ್ತುವರಿಯಾಗಿದ್ದಲ್ಲಿ ತೆರವಿಗೆ ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಕಟಾರಿಯಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದಲ್ಲಿ ಶನಿವಾರ ಏರ್ಪಡಿಸಿದ್ದ ರೇಷ್ಮೆ ಮತ್ತು ತೋಟಗಾರಿಕೆ ಬೆಳೆಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 16 ತೋಟಗಾರಿಕಾ ಕ್ಷೇತ್ರಗಳಿದ್ದು ಅವುಗಳ ಜಾಗದ ತುರ್ತು ಸರ್ವೆ ಕೈಗೊಳ್ಳಬೇಕು. ಒತ್ತುವರಿ ಕಂಡುಬಂದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತಕ್ಷಣ ತೆರವಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 3200ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಅಡಕೆ, ಮೆಣಸು ಸೇರಿ ವಿವಿಧ ಬೆಳೆಗಳು ಹಾನಿಯಾಗಿದ್ದು ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ವಿತರಿಸಲಾಗಿದೆ. ಕೃಷಿ ಸಿಂಚಾಯಿ, ಕೃಷಿ ಸಂಪದ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಸೇರಿ ಹಲವು ಯೋಜನೆಗಳಿದ್ದು ಅವುಗಳ ಉಪಯೋಗ ಪಡೆದುಕೊಳ್ಳುವಂತೆ ರೈತರಿಗೆ ಸಲಹೆ ನೀಡಿದರು.