ಜಿಲ್ಲೆ

ರಾಜೀವ್ ಗಾಂಧಿ ಆರೋಗ್ಯ ವಿವಿ ಪ್ರಾದೇಶಿಕ ಕಚೇರಿ ನಿಗದಿತ ಅವಧಿಯಲ್ಲಿ ಪೂರ್ಣ ಮೇರಿಹಿಲ್‌ನಲ್ಲಿ ಕಾಮವಾರಿ ವೀಕ್ಷಿಸಿ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿಕೆ

ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿ ನಿಗದಿತ ಅವಧಿ 2026ರ ಸೆಪ್ಟಂಬರ್‌ಗೆ ಪೂರ್ಣಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ನಗರದ ಮೇರಿಹಿಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಪ್ರಾದೇಶಿಕ ಕಚೇರಿ ಕಟ್ಟಡ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿದ ಅವರು, ಈ ಕಟ್ಟಡದಲ್ಲಿ ಸ್ಕಿಲ್ ಲ್ಯಾಬ್ ಹಾಗೂ ಸ್ಪೋರ್ಟ್ ಹಬ್ ಸುಮಾರು 49 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ ಎಂದರು.

ಮಂಗಳೂರು ಸೇರಿದಂತೆ ರಾಜ್ಯದ ಕಲಬುರಗಿ, ಮೈಸೂರು, ಹುಬ್ಬಳ್ಳಿ, ಬೆಂಗಳೂರು, ದಾವಣಗೆರೆ ಸೇರಿ ಆರು ಕಡೆಗಳಲ್ಲಿ ಸ್ಟೇಟ್ ಆಫ್ ಆರ್ಟ್ ಸ್ಕಿಲ್ ಲ್ಯಾಬ್‌ಗಳನ್ನು ನಿರ್ಮಾಣ ಮಾಡಲು ಬಜೆಟ್‌ನಲ್ಲಿ ಘೋಷಣೆಯಾಗಿದೆ. ದಾವಣಗೆರೆ ಹಾಗೂ ಕಲಬುರಗಿಯ ಕಟ್ಟಡ ಕಾಮಗಾರಿ ಸಂಪೂರ್ಣವಾಗಿದೆ ಎಂದವರು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್‌ನ ಅಧ್ಯಕ್ಷ ಡಾ.ಇಪ್ತಿಕಾರ್ ಅಲಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯ ಡಾ.ಶಿವಶರಣ್ ಶೆಟ್ಟಿ, ಕಣಚೂರು ವಿದ್ಯಾಸಂಸ್ಥೆಯ ಅಧ್ಯಕ್ಷ ಕಣಚೂರು ಮೋನು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ ಉಪಸ್ಥಿತರಿದ್ದರು.