ಆಲೂರು ಸಿದ್ದಾಪುರ ಜಾನಕಿ ಕಾಳಪ್ಪ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಂದ ಗ್ರಾಮದ ಮುಖ್ಯರಸ್ತೆ ಬದಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. 
ಜಿಲ್ಲೆ

ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಜ್ಯೊತ್ಸವ

ಶನಿವಾರಸಂತೆ: ಇಲ್ಲಿಗೆ ಸಮೀಪದ ಆಲೂರು ಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯನ್ನು ಜಂಟಿಯಾಗಿ ಆಚರಿಸಲಾಯಿತು.

68ನೇ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ಶಾಲೆಯ ಮುಂಭಾಗದ ಧ್ವಜಸ್ತಂಭದಲ್ಲಿ ಕನ್ನಡ ಧ್ವಜಾರೋಹಣವನ್ನು ಶುಕ್ರವಾರ ನೆರವೇರಿಸಿದ ಬಳಿಕ ಶಾಲೆಯ ವಿದ್ಯಾರ್ಥಿಗಳು ಆಲೂರು ಸಿದ್ದಾಪುರ ಜಂಕ್ಷನ್‌ವರೆಗೆ ಮೆರವಣಿಗೆ ತೆರಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಕನ್ನಡ ಗಾಯನ, ಕನ್ನಡ ನಾಡು ನುಡಿ, ಸಂಸ್ಕೃತಿ ಕುರಿತಾದ ವಿವಿಧ ನೃತ್ಯರೂಪಕಗಳು, ಕಿರು ನಾಟಕ ಪ್ರದರ್ಶನ, ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅಪಾರ ಪ್ರಮಾಣದಲ್ಲಿ ಪಾಲ್ಗೊಂಡಿದ್ದ ಗ್ರಾಮಸ್ಥರು ಮತ್ತು ಸಾರ್ವಜನಿಕರನ್ನು ರಂಜಿಸಿದರು.

ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆ ವ್ಯವಸ್ಥಾಪಕ ಟ್ರಸ್ಟಿ ಎಚ್.ಕೆ.ಶಿವಪ್ರಕಾಶ್, ಪಾಲಕರ ಸಮಿತಿ ಪದಾಧಿಕಾರಿಗಳು, ಸದಸ್ಯರು, ಶಿಕ್ಷಕರ ವರ್ಗದವರು, ಗ್ರಾಮಸ್ಥರು ಪಾಲ್ಗೊಂಡಿದ್ದರು.