ಜಿಲ್ಲೆ

ಗಂಗಾಧರ ಲಮಾಣಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಯಲ್ಲಾಪುರ: ತಾಲೂಕಿನ ಕಿರವತ್ತಿ ಗ್ರಾಪಂ ವ್ಯಾಪ್ತಿಯ ಅಲ್ಕೇರಿಗೌಳಿವಾಡ ಶಾಲೆಯ ಶಿಕ್ಷಕ, ಸಾಹಿತಿ ಗಂಗಾಧರ ಲಮಾಣಿ ಅವರಿಗೆ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್‌ನಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಧಾರವಾಡ ಸೃಜನಾ ರಂಗಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪರಿಷತ್ ಪ್ರಮುಖರು, ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು.

ಗಂಗಾಧರ ಲಮಾಣಿಯವರು ಕ್ರಿಯಶೀಲ ಶಿಕ್ಷಕರಾಗಿ ಗುರುತಿಸಿಕೊಂಡಿದ್ದು, ಗೌಳಿ ಬುಡಕಟ್ಟು ಸಮುದಾಯದ ಶಾಲೆಗಳ ಸಮಗ್ರ ಅಭಿವೃದ್ಧಿ ಮತ್ತು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದಾರೆ. ಇವರ ಸೇವೆ ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಶ್ರೀ ಕುಮಾರ ವಿರೂಪಾಕ್ಷೇಶ್ವರ ಮಹಾಸ್ವಾಮೀಜಿ, ಟಿಬೇಟಿಯನ್ ಗುರು ಶ್ರೀ ಜಂಪಾ ಲಾಮಾ,ಪ್ರಮುಖರಾದ ಲಕ್ಷ್ಮಣ ಎಸ್. ಉಪ್ಪಾರ, ಮೋಹನ್ ನಾಯಕ್ ಇತರರಿದ್ದರು.