ಕಡಬ: ಹನುಮಾನ್ ನಗರದಲ್ಲಿರುವ ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಜಂಟಿಯಾಗಿ ಶನಿವಾರ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.
ಮಜ್ದೂರ್ ಸಂಘ ಕಡಬ ತಾಲೂಕು ಅಧ್ಯಕ್ಷ ಚಂದ್ರಶೇಖರ ತುಂಬಿಮನೆ ಕಾರ್ಯಕ್ರಮ ಉದ್ಘಾಟಿಸಿದರು. ಆಂಗ್ಲ ಮಾಧ್ಯಮ ವಿಭಾಗ ಅಧ್ಯಕ್ಷ ಸದಾಶಿವ ಭಟ್ ಅಧ್ಯಕ್ಷತೆ ವಹಿಸಿದ್ದರು. ಆಂಗ್ಲ ಮಾಧ್ಯಮ ವಿಭಾಗ ಸಂಚಾಲಕ ಅಜಿತ್ ರೈ ಎ., ಸರಸ್ವತೀ ವಿದ್ಯಾಲಯ ಆಡಳಿತ ಮಂಡಳಿ ಸದಸ್ಯ ಶಿವಪ್ರಸಾದ್ ರೈ, ಪ್ರೌಢವಿಭಾಗ ಮುಖ್ಯ ಶಿಕ್ಷಕಿ ಶೈಲಶ್ರೀ ಎಸ್.ರೈ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಶಿಕ್ಷಕ ವಸಂತ ಕೆ. ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಭವಿಷ್ಯಾ ಕೆ.ಶೆಟ್ಟಿ ಸ್ವಾಗತಿಸಿದರು. ಹವನ್ ಎ.ವೈ. ನಿರೂಪಿಸಿದರು. ಪಲ್ಲವಿ ಎಂ.ಎ. ವಂದಿಸಿದರು.