ಜಿಲ್ಲೆ

ಮಲೆನಾಡು ರಕ್ಷಣಾ ಸೇನೆ ಅಧ್ಯಕ್ಷರಾಗಿ ರಕ್ಷಿತ್ ರವೀಂದ್ರ ಗೌಡ ಆಯ್ಕೆ

ಮಡಿಕೇರಿ: ಜಿಲ್ಲೆಯಲ್ಲಿ ಮಲೆನಾಡು ರಕ್ಷಣಾ ಸೇನೆ ಅಸ್ಥಿತ್ವಕ್ಕೆ ಬಂದಿದ್ದು, ಜಿಲ್ಲಾ ಮತ್ತು ತಾಲೂಕು ಹಾಗೂ ಹೋಬಳಿ ಪದಾಧಿಕಾರಿಗಳನ್ನು ಶೀಘ್ರವಾಗಿ ನೇಮಕ ಮಾಡಲಾಗುವುದು ಎಂದು ಮಲೆನಾಡು ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ರಕ್ಷಿತ್ ರವೀಂದ್ರ ಗೌಡ ತಿಳಿಸಿದರು.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡು ರಕ್ಷಣಾ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಾಗರ್ ಜಾನೇಕೆರೆರವರು ಜಿಲ್ಲಾಧ್ಯಕ್ಷನ್ನಾಗಿ ತನ್ನನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಜಿಲ್ಲಾ ಪದಾಧಿಕಾರಿಗಳ ನೇಮಕ ಮತ್ತು ತಾಲೂಕು, ಹೋಬಳಿ ಮಟ್ಟದ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷ ನೇತೃತ್ವದಲ್ಲಿ ನೇಮಕ ಮಾಡಲಾಗುವುದು ಎಂದು ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯತೀಶ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಪ್ರಥ್ವಿ ಗೌಡಳ್ಳಿ, ಸಂಘಟನಾ ಕಾರ್ಯದರ್ಶಿ ಉಮೇಶ್ ಉಪಸ್ಥಿತರಿದ್ದರು.