ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಸಹಭಾಗಿತ್ವದಲ್ಲಿರುವ ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿಆರ್‌ಒ)ಯಾಗಿ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಅನುಭವ ಹೊಂದಿ, 12 ವರ್ಷಗಳಿಂದ ಪ್ರಾಂಶುಪಾಲರಾಗಿ, ಆಂಗ್ಲಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ವಾಗ್ಮಿಯಾಗಿದ್ದು, 2 ಸಾವಿರಕ್ಕೂ ಅಧಿಕ ಅನೇಕ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಭಾಷಣಕಾರರಾಗಿ, ರಾಜ್ಯಮಟ್ಟದ ಎನ್‌ಎಸ್‌ಎಸ್ ಶಿಬಿರದಲ್ಲಿ ಸಂಪನ್ಮೂಲ ವ್ಯಕಿಯಾಗಿ ಹಾಗೂ 300ಕ್ಕೂ ಅಧಿಕ ಎನ್‌ಎಸ್‌ಎಸ್ ಶಿಬಿರದಲ್ಲಿ ಉಪನ್ಯಾಸಕರಾಗಿ ಜನಪ್ರಿಯರಾಗಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕನಾಗಿ, ಪ್ರವೃತ್ತಿಯಲ್ಲಿ ಕಲಾವಿದರಾಗಿದ್ದಾರೆ.