ಮಂಡ್ಯ: ಜಿಲ್ಲಾದ್ಯಂತ ಪವಿತ್ರ ರಂಜಾನ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಣೆ ಮಾಡಲಾಯಿತು.
ನಗರದ ಈದ್ಗಾ ಮೈದಾನದಲ್ಲಿ ಮುಸಲ್ಮಾನ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಚಿಣ್ಣರು ಸೇರಿದಂತೆ ಎಲ್ಲರೂ ಪರಸ್ಪರ ಹಬ್ಬದ ಶುಭಾಷಯ ಕೋರಿದರು. ಹಬ್ಬದ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಉಪವಾಸ ಆಚರಿಸುತ್ತಾರೆ. ಅಂತೆಯೇ ಉಪವಾಸ ಅಂತ್ಯಗೊಂಡು ಎಲ್ಲರೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಹಬ್ಬವನ್ನು ಮುಕ್ತಾಯಗೊಳಿಸಿದರು. ವಿವಿಧ ಪಕ್ಷದ ರಾಜಕೀಯ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಹಬ್ಬದಲ್ಲಿ ಭಾಗಿಯಾದರು.
ಶಾಸಕ ರವಿಕುಮಾರ್ ಗಣಿಗ ಮಾತನಾಡಿ, ಯುಗಾದಿ ಮತ್ತು ರಂಜಾನ್ ಹಬ್ಬ ಒಟ್ಟಿಗೆ ಬಂದಿದೆ. ಅದೇ ರೀತಿ ಎಲ್ಲ ಸಮುದಾಯವರು ಸೌಹಾರ್ದಯುತವಾಗಿ ಸಂಭ್ರಮದಿಂದ ಹಬ್ಬಗಳನ್ನು ಆಚರಣೆ ಮಾಡಿದ್ದಾರೆ. ಭಾರತದಲ್ಲಿ ಎಲ್ಲ ಸಮುದಾಯದವರು ಸಹಬಾಳ್ವೆ, ಸೌಹಾರ್ದಯುತವಾಗಿ ಸಂವಿಧಾನದ ಮೇಲೆ ನಂಬಿಕೆ ಇಟ್ಟು ಬದುಕು ನಡೆಸುತ್ತಿದ್ದಾರೆ ಎಂದು ಹೇಳಿದರು.
ಮುಡಾ ಅಧ್ಯಕ್ಷ ನಯೀಂ ಇತರರಿದ್ದರು.