ಜಿಲ್ಲೆ

ರಾಮಕುಂಜ ಗೋಶಾಲೆಗೆ ಜಿಲ್ಲಾಧಿಕಾರಿ ಭೇಟಿ

ಸೌಮ್ಯ ಆರ್

ಕಡಬ: ರಾಮಕುಂಜ ಗ್ರಾಪಂ ವ್ಯಾಪ್ತಿಯ ಗೋಕುಲನಗರದ ಗೋಶಾಲೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ ನೀಡಿದರು.

ಉದ್ಯೋಗ ಖಾತ್ರಿ ಯೋಜನೆ ಹಾಗೂ ಪಶುಸಂಗೋಪನಾ ಇಲಾಖೆ ವತಿಯಿಂದ ರಾಮಕುಂಜ ಗ್ರಾಪಂ ವ್ಯಾಪ್ತಿಯ ಗೋಕುಲನಗರದಲ್ಲಿ ಗೋಶಾಲೆ ನಿರ್ಮಾಣಗೊಂಡಿದೆ. ಪಶುಸಂಗೋಪನಾ ಇಲಾಖೆಯ ಕಡಬ ತಾಲೂಕು ಸಹಾಯಕ ನಿರ್ದೇಶಕ ಡಾ.ಅಜಿತ್ ಗೋಶಾಲೆ ಕುರಿತು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು.

ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್, ಕಡಬ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ಕುಮಾರ್ ಭಂಡಾರಿ, ಕಡಬ ತಹಸೀಲ್ದಾರ್ ಪ್ರಭಾಕರ ಖಜೂರೆ, ರಾಮಕುಂಜ ಗ್ರಾಪಂ ಅಧ್ಯಕ್ಷೆ ಸುಚೇತಾ ಬಿ., ಪಿಡಿಒ ಮೋಹನ್‌ಕುಮಾರ್, ಕಾರ್ಯದರ್ಶಿ ಲಲಿತಾ ಜಿ.ಡಿ., ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.