ಕೆಎಸ್‌ಆರ್‌ಟಿಸಿ ಬಸ್ 
ಜಿಲ್ಲೆ

KSRTC ಬಸ್​​ ಪ್ರಯಾಣ ದರ ಏರಿಕೆ ಇಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Webdesk - Savina Naik

ಬೆಂಗಳೂರು:   ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ದರ ಏರಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶೀಘ್ರವೇ ಬಸ್ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದ್ದಾರೆ.

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾತನಾಡಿ, ಬಸ್ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ. ರಾಜುಕಾಗೆ ಹೇಳಿರೋದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದ್ದಾರೆ.

ಕೆಎಸ್ ಆರ್ ಟಿಸಿ ಬಸ್ಸುಗಳ ಪ್ರಯಾಣ ದರ ಏರಿಕೆಯ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ.@BJP4Karnataka ನಾಯಕರು ಕಪೋಲಕಲ್ಪಿತ ವರದಿಗಳನ್ನು ಇಟ್ಟುಕೊಂಡು ಸುಳ್ಳು ಹಬ್ಬಿಸುವುದನ್ನು ಬಿಟ್ಟು, ಕಳೆದ 10 ವರ್ಷದಲ್ಲಿ ವಾಹನ ಬಿಡಿಭಾಗಗಳ ಬೆಲೆ ಏರಿಕೆಯಾಗಿದ್ದರ ಬಗ್ಗೆ, ಇಂಧನ ತೈಲಗಳ ಬೆಲೆ ಏರಿಕೆಯ ಬಗ್ಗೆ, ರೈಲು ಪ್ರಯಾಣ ದರ ಏರಿಕೆಯ ಬಗ್ಗೆ ಉತ್ತರ ನೀಡಲಿ. ಕೇಂದ್ರ ಸರ್ಕಾರದ ಬೆಲೆ ಏರಿಕೆಯ ನೀತಿಯಿಂದಾಗಿ ರಾಜ್ಯ ಸರ್ಕಾರಗಳ ಮೇಲೆ ಅನಿವಾರ್ಯ ಹೊರೆ ಆಗಿರುವ ಬಗ್ಗೆ ಜನತೆಗೆ ಉತ್ತರಿಸಲಿ ಎಂದಿದ್ದಾರೆ.