ಕುಂದಾಪುರ: ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಗೋಪಾಲಕೃಷ್ಣ ಶೆಟ್ಟಿ ಮಾರ್ಕೊಡು ಸಚಿವರನ್ನು ಗೌರವಿಸಿದರು.
ಕೋಟೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್, ಪ್ರಧಾನ ತಂತ್ರಿ ಪ್ರಸನ್ನಕುಮಾರ್ ಐತಾಳ್, ಕೆ.ರಾಜಗೋಪಾಲ ಆಚಾರ್ಯ, ಬಿ.ಹಿರಿಯಣ್ಣ, ಕೋಟೇಶ್ವರ ಗ್ರಾ.ಪಂ.ಅಧ್ಯಕ್ಷೆ ರಾಗಿಣಿ ದೇವಾಡಿಗ, ಬೀಜಾಡಿ ಗ್ರಾ.ಪಂ.ಅಧ್ಯಕ್ಷ ಬಿ.ಪ್ರಕಾಶ್ ಜಿ ಪೂಜಾರಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಗ್ರಾ.ಪಂ.ಸದಸ್ಯರು, ಸ್ಥಳೀಯ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.