ಜಿಲ್ಲೆ

ಲವ್ ಯೂ ರಚ್ಚು ಸಿನಿಮಾ ದುರಂತ ಪ್ರಕರಣ: ಮೂವರು ಆರೋಪಿಗಳ ಬಂಧನ, ಜಮೀನು ಮಾಲೀಕ ಪರಾರಿ

ರಾಮನಗರ: ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯದಲ್ಲಿ ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಹೈಟೆನ್ಷನ್​ ವಿದ್ಯುತ್​ ತಂತಿ ತಗುಲಿ ಸೋಮವಾರ ಫೈಟರ್​ ವಿವೇಕ್​(35) ಮೃತಪಟ್ಟಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮಾದ ನಿರ್ದೇಶಕ ಶಂಕರ್ ರಾಜ್, ಸಾಹಸ ಕಲಾವಿದ ವಿನೋದ್ ಹಾಗೂ ಕ್ರೇನ್ ಚಾಲಕ ಮುನಿಯಪ್ಪನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ತಡರಾತ್ರಿ ಜಡ್ಜ್ ಮುಂದೆ ಹಾಜರು ಪಡಿಸಿದ ಬಿಡದಿ ಪೊಲೀಸರು ತಡರಾತ್ರಿಯೇ ಅವರನ್ನು ಜೈಲಿಗೆ ಕಳುಹಿಸಿದ್ದಾರೆ. ಸೋಮವಾ (ಆಗಸ್ಟ್​ 09) ಚಿತ್ರೀಕರಣದ ವೇಳೆ ಶಾರ್ಟ್ ಸರ್ಕ್ಯೂಟ್​ನಿಂದ ಫೈಟರ್​ ಹಾಗೂ ಯುವ ಕಲಾವಿದ ವಿವೇಕ್ ಸಾವಿಗೀಡಾಗಿದ್ದರು. ಬಿಡದಿ‌ಯ ಜೋಗನಪಾಳ್ಯ ಗ್ರಾಮದಲ್ಲಿ ನಡೆಯುತ್ತಿದ್ದ ರಚ್ಚು ಲವ್ ಯು ಸಿನಿಮಾ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿತ್ತು.

ಬಿಡದಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ. ಜಮೀನು‌ ಮಾಲೀಕ ಪುಟ್ಟರಾಮು ಸ್ಥಳದಿಂದ ನಾಪತ್ತೆ ಆಗಿದ್ದು, ಆತನಿಗೆಗಾಗಿ ಪೊಲೀಸರ ಹುಟುಕಾಟ ಮುಂದುವರಿದಿದೆ.

ಘಟನೆಯ ವಿವರಣೆ

ನಟ ಅಜಯ್ ರಾವ್ ಮತ್ತು ನಟಿ ರಚಿತ ರಾಮ್ ನಟನೆಯ ‘ಲವ್​ ಯೂ ರಚ್ಚು’ ಕನ್ನಡ ಸಿನಿಮಾ ಶೂಟಿಂಗ್ ಸೋಮವಾರ ರಾಮನಗರದ ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯದಲ್ಲಿ ನಡೆಯುತ್ತಿತ್ತು. ಈ ವೇಳೆ ವಿದ್ಯುತ್​ ಅವಘಡ ಸಂಭವಿಸಿ ಇಬ್ಬರ ಸ್ಥಿತಿ ಗಂಭೀರವಾಗಿತ್ತು. ಈ ಪೈಕಿ ಫೈಟರ್​ ತಮಿಳುನಾಡು ಮೂಲದ ​ವಿವೇಕ್ ಮೃತಪಟ್ಟಿದ್ದು, ಮತ್ತೊಬ್ಬನಿಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಚಿತ್ರೀಕರಣ ವೇಳೆ ಮೆಟಲ್​ ರೋಪ್​ ಬಳಸಿದ್ದೇ ಅವಘಡಕ್ಕೆ ಕಾರಣ. ಹೈ ಟೆನ್ಶನ್​ ತಂತಿಗೆ ತಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಅವಘಡ ಸಂಭವಿಸುತ್ತದ್ದಂತೆ ಚಿತ್ರೀಕರಣ ನಿಲ್ಲಿಸಲಾಗಿದೆ. (ದಿಗ್ವಿಜಯ ನ್ಯೂಸ್​)