ಜಿಲ್ಲೆ

ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಸಾವು

 ಚನ್ನಪಟ್ಟಣ
ತಾಲೂಕಿನ ತಿಟ್ಟಮಾರನಹಳ್ಳಿ ಬಳಿ ಬೆಂಗಳೂರು - ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ನಡೆದಿದ್ದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾಳೆ.

ಕೇರಳ ಮೂಲದ ಜೆ.ಆದಿಲಾ (23) ಮೃತೆ. ಗುರುವಾರ ಮುಂಜಾನೆ ಬೆಂಗಳೂರಿನಿಂದ ಕೇರಳದ ಕ್ಯಾಲಿಕಟ್​ಗೆ ತೆರಳುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್​ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು.

ಅಪಘಾತದ ರಭಸಕ್ಕೆ ಆದಿಲಾ ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯವಾಗಿತ್ತು. ಗಾಯಾಳು ಆದಿಲಾ ಅವರನ್ನು ಬೆಂಗಳೂರಿನ ಸಾಯಿಕೃಪಾ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.