ರಾಮನಗರ: ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಬಳಿ ನೂತನ ದಶಪಥ ಹೆದ್ದಾರಿಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಬೃಹತ್ ಕಂಟೈನರ್ ಗೆ ಹಿಂದಿನಿಂದ ಇನ್ನೋವಾ ಕಾರು ಡಿಕ್ಕಿಯೊಡೆದಿದ್ದು, ಡಿಕ್ಕಿಯೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನ ಚಾಲಕ ಮತ್ತು ವೃದ್ದೆಯೊಬ್ಬರಿಗೆ ತೀವ್ರ ಗಾಯಗಳಾಗಿದ್ದು, ಇವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇತರೆ ಮೂವರು ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಗಾಯಾಳುಗಳ ಮಾಹಿತಿಯೂ ಲಭ್ಯವಾಗಿಲ್ಲ. ಹೆದ್ದಾರಿ ಪೊಲೀಸರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಮಗಿಸಿ ಪರಿಶೀಲನೆ ನಡೆಸಿದ್ದಾರೆ.