ರಾಮನಗರ: ಪರೀಕ್ಷೆ ಭಯ, ಹಾಜರಾತಿ ಕೊರತೆಯನ್ನು ಎದುರಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರಾಮದೇವರ ಬೆಟ್ಟದಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಬೆಂಗಳೂರಿನ ಬಿಇಎಂಎಲ್ ಲೇಔಟ್ನ ನಿವಾಸಿಯಾಗಿರುವ ವಿದ್ಯಾರ್ಥಿನಿ ಕ್ರೈಸ್ಟ್ ಕಾಲೇಜಿನ ಸೈಕಾಲಜಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ಹಾಜರಾತಿ ಕೊರತೆ ಎದುರಿಸುತ್ತಿದ್ದ ಈಕೆ, ಅಸೈನ್ಮೆಂಟ್ಗಳನ್ನು ಸಲ್ಲಿಸಿರಲಿಲ್ಲ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗಿದ್ದ ಈಕೆ ಒಬ್ಬಳೇ ಬಂದು, ರಾಮದೇವರ ಬೆಟ್ಟದಿಂದ ಆತ್ಮಹತ್ಯೆ ಮಾಡಿಕೊಳ್ಳಲು ಜಿಗಿದಿದ್ದಾಳೆ.
ಇದನ್ನು ಗಮನಿಸಿ ಇಲ್ಲಿನ ಗೃಹ ರಕ್ಷಕ ದಳದ ಸಿಬ್ಬಂದಿ, ತಕ್ಷಣ ಈ ವಿಚಾರವನ್ನು ತಮ್ಮ ಮೇಲಿನ ಅಧಿಕಾರಿಗಳಿಗೆ ತಿಳಿಸಿ, ಈಕೆಯನ್ನು ರಾಮನಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಪ್ರಜ್ಞಾಹಿನ ಸ್ಥಿತಿಯಲ್ಲಿರುವ ಈಕೆಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಪತ್ಬಾಂದವ ಶಶಿಕುಮಾರ್
ಈ ವೇಳೆ ಅಂಬುಲೆನ್ಸ್ಗೆ ಕರೆ ಮಾಡಿದರೆ ಯಾರೂ ಬರಲು ಒಪ್ಪದೆ ಇಲ್ಲದೆ ಸಬೂಬು ಹೇಳಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಪ್ರಾಣವನ್ನು ರಕ್ಷಣೆ ಮಾಡುವ ಉದ್ದೇಶದಿಂದ ತಮ್ಮ ಜೀಪಿನಲ್ಲಿಯೇ ಶಶಿಕುಮಾರ್ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆತಂದು ಮಾನವೀಯತೆ ಮೆರೆದಿದ್ದಾರೆ.