ಜಿಲ್ಲೆ

ನಗರಸಭೆ ನೌಕರರಿಗೆ ನೋಟಿಸ್ ಜಾರಿಕರ್ತವ್ಯಲೋಪ ಆರೋಪ ಹಿನ್ನೆಲೆಯಲ್ಲಿ ಯೋಜನಾ ನಿರ್ದೇಶಕ ರಮೇಶ್ ಕ್ರಮ

ಕನಕಪುರ: ನಗರಸಭೆಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡದೆ ಅಲೆದಾಡಿಸಿ ಕಡತಗಳನ್ನು ವಿಲೇವಾರಿ ಮಾಡದೆ ಬಾಕಿ ಉಳಿಸಿಕೊಂಡಿದ್ದ ಮೂವರು ನೌಕರರಿಗೆ ಕರ್ತವ್ಯಲೋಪ ಆರೋಪದ ಮೇರೆಗೆ ಜಿಲ್ಲಾ ನಗರಾಭಿವದ್ದಿ ಯೋಜನಾ ನಿರ್ದೇಶಕ ರಮೇಶ್ ನೋಟಿಸ್ ಜಾರಿ ಮಾಡಿದ್ದಾರೆ.

ನಗರಸಭೆಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಸಮರ್ಪಕವಾಗಿ ಆಗುತ್ತಿಲ್ಲ ಎಂಬ ದೂರಿನ ಹಿನ್ನಲೆಯಲ್ಲಿ ನಗರಸಭೆಗೆ ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು. ಪರಿಶೀಲನಾ ವೇಳೆ ಕಂದಾಯ ನಿರೀಕ್ಷಕ, ಕೆ.ಶಿವರಾಜು 37 ಕಡತಗಳು, ಪ್ರಥಮ ದರ್ಜೆ ಸಹಾಯಕ ಮಲ್ಲಿಕಾರ್ಜುನ್ 126 ಕಡತಗಳು, ಪ್ರಥಮ ದರ್ಜೆ ಸಹಾಯಕ ರಾಯ್ಯ 93 ಕಡತಗಳನ್ನು ಬಾಕಿ ಉಳಿಸಿಕೊಂಡಿದ್ದು ಇವರ ವಿರುದ್ಧ ಶಿಸ್ತುಕ್ರಮಕ್ಕೆ ಸೂಚಿಸಿ ನೋಟಿಸ್ ಜಾರಿ ಮಾಡಿದ್ದಾರೆ.