ರಾಮನಗರ : ನಗರದ ಕೋರ್ಟ್ ರಸ್ತೆಯಲ್ಲಿರುವ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಸೋಮವಾರ ಗುರು ಪೂರ್ಣಿಮೆ ಮಹೋತ್ಸವದ ಅಂಗವಾಗಿ ಶಿರಡಿ ಸಾಯಿಬಾಬಾ ಟ್ರಸ್ಟ್ ವತಿಯಿಂದ ಪೂಜಾ ಕಾರ್ಯಕ್ರಮಗಳು ಜರುಗಿದವು.
ಸೋಮವಾರ ಬೆಳಗಿನಿಂದಲೇ ದೇವಾಲಯದಲ್ಲಿ ಅಭಿಷೇಕ, ಕಾಕಡಾರತಿ, ಪಂಚಾಮೃತ ಅಭಿಷೇಕ, ಸತ್ಯನಾರಾಯಣಸ್ವಮಿ ಪೂಜೆ ನಡೆಯಿತು. ಬೆಳಿಗ್ಗೆ 11 ಗಂಟೆಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಯಿಬಾಬಾ ಅವರ ಭಾವಚಿತ್ರವನ್ನು ಮುತ್ತಿನ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಲಾಯಿತು. ಮಧ್ಯಾಹ್ನ ದೇವಾಲಯದ ಆವರಣದಲ್ಲಿ ಅನ್ನಸಂತರ್ಪಣಾ ಕಾರ್ಯಕ್ರಮ ನಡೆಯಿತು.
ವಾಸವಿ ಭಜನಾ ಮಂಡಳಿ, ಸರಸ್ವತಿ ಕಲಾ ಮಂದಿರದವರಿಂದ ಭಜನಾ ಕಾರ್ಯಕ್ರಮಗಳು ನಡೆದವು. ದೇವಾಲಯವನ್ನು ವಿಶೇಷ ಬಣ್ಣ ಬಣ್ಣದ ಹೂಗಳಿಂದ, ಬಗೆ ಬಗೆಯ ಹಣ್ಣುಗಳಿಂದ ಅಲಂಕಾರ ಮಾಡಲಾಗಿತ್ತು.