ಜಿಲ್ಲೆ

ಶನಿವಾರ ಹಾರೋಹಳ್ಳಿಯಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ

ಗಂಗಾಧರ ಬಿ ವಿ

ರಾಮನಗರ: ಹಾರೋಹಳ್ಳಿಯಲ್ಲಿ ಫೆ. 25ರ ಶನಿವಾರ ನಡೆಯುವ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕ್ರಮದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ನ ನೂರಾರು ಕಾರ್ಯಕರ್ತರು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ರಾಮಸಾಗರ ಕೃಷ್ಣ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ, ಕೃಷಿ, ನೀರಾವರಿ, ಮೀಸಲಾತಿ, ಕೌಶಲ್ಯಾಭಿವೃದ್ಧಿ, ಉದ್ಯಮ, ಸಾಮಾಜಿಕ ನ್ಯಾಯ, ನೈರ್ಮಲ್ಯ ಮುಂತಾದ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡಿದೆ ರಾಜ್ಯ ಮತ್ತು ಕೇಂದ್ರದಲ್ಲಿ ಉತ್ತಮ ಆಡಳಿತ ನೀಡುತ್ತಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಪಕ್ಷಕ್ಕೆ ಯುವಕರ ದಂಡು ಸೇರುತ್ತಿದೆ.

ಯುವಕರು ಪಕ್ಷ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ ಇದರಿಂದ ಪ್ರತಿ ಬೂತ್  ಮಟ್ಟದಲ್ಲೂ ಪಕ್ಷ ಉತ್ತಮವಾಗಿ ಸಂಘಟನೆಯಾಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿವೆ ಆದರೆ ಅವುಗಳು ಅನುಷ್ಟಾನಕ್ಕೆ ಬರುವುದಿಲ್ಲ. ಬಿಜೆಪಿ ಸರ್ಕಾರ ಎಲ್ಲಾ ಸಮುದಾಯಗಳ ಪ್ರಗತಿಗೆ ಶ್ರಮಿಸಿದೆ ಎಂದರು.

ಶನಿವಾರ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ಕೆ.ಆರ್.ಐ.ಡಿ.ಎಲ್ ಅಧ್ಯಕ್ಷ ಎಂ. ರುದ್ರೇಶ್, ಕನ್ನಡ ಚಲನಚಿತ್ರ ನಟ ಶೋಭರಾಜ್, ರಾಮನಗರ ತಾಲೂಕು ಬಿಜೆಪಿ ಘಟಕ ಅಧ್ಯಕ್ಷ ಗೋಪಾಲ್, ಗ್ರೇಟರ್ ಬಿಡದಿ ಪ್ರಾಧಿಕಾರ ಅಧ್ಯಕ್ಷ ವರದರಾಜುಗೌಡ, ಪ್ರಾಧಿಕಾರ ಮಾಜಿ ಅಧ್ಯಕ್ಷ ಮುರಳೀಧರ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದ್ರು ಮುಖಂಡರಾದ ಡಾ. ಪುಣ್ಯವತಿ, ವಕೀಲ ಡಿ. ರಾಜು ಆಗಮಿಸಲಿದ್ದಾರೆ ಎಂದು ತಿಳಿಸಿದರು.