ಜಿಲ್ಲೆ

ಕಾವೇರಿಗಾಗಿ ದಿಢೀರ್ ರಾಮನಗರದಲ್ಲಿ ಪ್ರತಿಭಟನೆ

ಗಂಗಾಧರ ಬಿ ವಿ

ರಾಮನಗರ: ತಮಿಳು ನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕಾವೇರಿ ನದಿ ನೀರು ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ನಿರ್ದೇಶನ ವಿರೋಧಿಸಿ ವಿವಿಧ ಸಂಘಟನೆಗಳ ಮುಖಂಡರು ರಾಮನಗರದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.

ನಗರದ ಜಾನಪದ ಲೋಕದ ಜಿಲ್ಲಾಧಿಕಾರಿ ನಿವಾಸದ ಬಳಿ ಬೆಂಗಳೂರು ಮೈಸೂರು ಹಳೇ ಹೆದ್ದಾರಿಯನ್ನು ದಿಢೀರ್ ತಡೆ ನಡೆಸಿ ಪ್ರತಿಭಟಿಸಿದರು.

ಈ ವೇಳೆ ರಾಜ್ಯ ಸರ್ಕಾರ, ಪ್ರಾಧಿಕಾರ, ಜಲಮಂತ್ರಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ಕಾರಣಕ್ಕೂ ತಮಿಳು ನಾಡಿಗೆ ನೀರು ಹರಿಸಿದ ಬಾರದು , ಒಂದು ವೇಳೆ ನೀರು ಹರಿಸಿದ್ದೇ ಆದರೆ ಉಗ್ರ ಹೋರಾಟ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.

ನಂತರ ಪೊಲೀಸರು ಮಧ್ಯ ಪ್ರವೇಶ ಮಾಡಿ ಪ್ರತಿಭಟನಾಕಾರರನ್ನು ರಸ್ತೆಯಿಂದ ತೆರವುಗೊಳಿಸಿ ಸ್ತಬ್ಧಗೊಂಡಿದ್ದ ಸಂಚಾರವನ್ನು ಯಥಾಸ್ಥಿತಿಗೆ ತಂದರು.