ಜಿಲ್ಲೆ

ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ರಾಮನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರು ಸಿಡಿಪಿಓ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಕೇಂದ್ರ ಸರ್ಕಾರ ನಿರ್ಲಕ್ಷೃ ಮಾಡುತ್ತಿದೆ ಹಾಗೂ ರಾಜ್ಯದಲ್ಲಿ ಹೊಸ ಮೊಬೈಲ್‌ಗಳನ್ನು ಕೊಡಿಸುವಂತೆ 2023 ಬಜೆಟ್‌ನಲ್ಲಿ ಘೋಷಣೆ ಮಾಡಿದ ಒಂದು ಸಾವಿರ ರೂ.ಗಳ ಗೌರವ ಧನವನ್ನು ಹೆಚ್ಚಳ ಮಾಡುವುದು ಸೆರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಸಮಿತಿ ಗೌರವ ಅಧ್ಯಕ್ಷೆ ಜಯಲಕ್ಷ್ಮಮ್ಮ ಹಲವಾರು ವರ್ಷಗಳಿಂದಲೂ ಅಂಗನವಾಡಿ ಕಾರ್ಯಕರ್ತೆಯರನ್ನು ನಿಕೃಷ್ಠವಾಗಿ ನಡೆಸಿಕೊಳ್ಳಲಾಗುತ್ತಿದೆ. ಕನಿಷ್ಠ ವೇತನವನ್ನೂ ಸಹ ನೀಡದೆ ದುಡಿಸಿಕೊಳ್ಳಲಾಗುತ್ತಿದ್ದು, ಇದನ್ನು ಸಂಘಟನೆ ಮೂಲಕ ಕೇಳಲು ಹೋದರೆ ಅಂತಹವನ್ನು ಹತ್ತಿಕ್ಕಿಸುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದರು.

45 ಮತ್ತು 46ನೇ ಇಂಡಿಯನ್ ಲೇಬರ್ ಕಾನ್ಪರೆನ್ಸ್‌ಗಳು ಅಂಗನವಾಡಿ ಕಾರ್ಯಕರ್ತೆಯರನ್ನು ಹಾಗೂ ಸಹಾಯಕರಿಯರು ಸೇರಿದಂತೆ ದೇಶ ಎಲ್ಲಾ ಸ್ಕೀಮ್‌ಗಳ ಕಾರ್ಯಕರ್ತೆರಯನ್ನು ಕೆಲಸಗಾರರು ಎಂದು ಪರಿಗಣಿಸಬೇಕು. ಆದರೆ ಈವರೆವಿಗೂ ಆಗುತ್ತಿಲ್ಲ. ಈಗಲೂ ಕೇವಲ ಗೌರವ ಧನಕ್ಕೆ ಕಾರ್ಯನಿರ್ವಹಿಸಬೇಕಾದ ಅನಿವಾರ್ಯತೆ ಇದೆ.

ಅಷ್ಟೇ ಅಲ್ಲದೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಐಸಿಡಿಎಸ್ ಯೇತರ ಕಾರ್ಯಗಳಿಗೆ ಹೆಚ್ಚಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಕೆಲಸದ ಒತ್ತಡವನ್ನು ಹೆಚ್ಚು ಮಾಡಲಾಗುತ್ತಿದೆ. ಇದರ ಜೊತೆಗೆ ಇತರೆ ಇಲಾಕೆ ಕೆಲಸಗಳನ್ನು ನಮ್ಮ ಮೇಲೆಯೇ ಹೇರುವ ಮೂಲಕ ಮಾನಸಿಕವಾಗಿ ನಮ್ಮನ್ನು ಹಿಂಸಿಸಲಾಗುತ್ತಿದೆ. ಒಂದು ವೇಳೆ ಇದನ್ನು ಪ್ರಶ್ನೆ ಮಾಡಿದರೆ ಅಂತವರನ್ನು ವಿವಿಧ ಕಾರಣಗಳನ್ನು ನೀಡಿ ಬಲಿಪಶು ಮಾಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷೆ ಪುಷ್ಪಲತಾ, ಕಾರ್ಯದರ್ಶಿ ಭಾಗ್ಯಮ್ಮ, ಖಜಾಂಚಿ ಶಾರದ ಮುಂತಾದವರು ಇದ್ದರು.