ಜಿಲ್ಲೆ

ವಿಶ್ವಕ್ಕೆ ಬಹುದೊಡ್ಡ ಸಾಹಿತ್ಯ ಕೊಡುಗೆ ರಾಮಾಯಣ ಶಾಸಕ ಶ್ರೀನಿವಾಸ್‌ಮೂರ್ತಿ ಬಣ್ಣನೆ, ಮಾನವೀಯ ಗುಣ ಅನುಸರಿಲು ಮಹಾಕಾವ್ಯ ಸಹಕಾರಿ

ನೆಲಮಂಗಲ: ರಾಮಾಯಣದಂತಹ ಮೇರುಕೃತಿ ರಚಿಸಿ, ಭಾರತದ ಸಂಸ್ಕೃತಿ ಮೇರುಗು ಹೆಚ್ಚಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಡಾ.ಕೆ.ಶ್ರೀನಿವಾಸ್‌ಮೂರ್ತಿ ತಿಳಿಸಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಾಲ್ಮೀಕಿ ಅವರ ರಾಮಾಯಣ ಮಹಾಕಾವ್ಯ ಇಡೀ ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಸಾಹಿತ್ಯ ಕೊಡುಗೆ. ರಾಮಾಯಣ ದೇಶ ಭಾಷೆಗೆ ಸೀಮಿತಗೊಳ್ಳದೆ ಜಾಗತಿಕವಾಗಿ ಆರಾಧಿಸಲ್ಪಟ್ಟಿದೆ. ಮಾನವೀಯ ಗುಣ ಮೈಗೂಡಿಸಿಕೊಳ್ಳುವುದು ಸೇರಿ ಉತ್ತಮ ಸಮಾಜ ನಿರ್ಮಾಣದ ಮಹತ್ವದ ಸಂಗತಿಗಳನ್ನು ರಾಮಾಯಣದಿಂದ ಕಲಿಯಬಹುದಾಗಿದೆ ಎಂದರು.

ಪುಷ್ಪನಮನ: ವಿವಿಧ ಹಂತದ ಜನಪ್ರತಿನಿಧಿಗಳು, ಸಮುದಾಯ ಮುಖಂಡರು ಹಾಗೂ ತಾಲೂಕು ಕಚೇರಿ ವಿವಿಧ ಶಾಖೆಗಳ ಅಧಿಕಾರಿ ಸಿಬ್ಬಂದಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ತಹಸೀಲ್ದಾರ್ ಎಂ. ಶ್ರೀನಿವಾಸ್, ತಾಪಂ ಇಒ ಲಕ್ಷ್ಮೀನಾರಾಯಣ್, ತಾಲೂಕು ಆರೋಗ್ಯಾಧಿಕಾರಿ ಹರೀಶ್, ಶಿರಸ್ತೇದಾರ್ ಎಂ.ವಿ.ಮಂಜುನಾಥ್, ರಾಜಸ್ವ ನಿರೀಕ್ಷಕ ರವಿಕುಮಾರ್, ಶಿವಕುಮಾರ್, ಸರ್ಕಾರಿ ನೌಕರರ ಸಂಘದ ತಾಲೂಕು ಉಪಾಧ್ಯಕ್ಷ ಎಚ್.ಹನುಮಂತರಾಜು, ಶುಶ್ರೂಷಕ ಸಂಘದ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ವಾಲ್ಮೀಕಿ ಸಂಘದ ತಾಲೂಕು ಅಧ್ಯಕ್ಷ ಬಿ.ಎನ್.ನರಸಿಂಹಮೂರ್ತಿ, ಉಪಾಧ್ಯಕ್ಷ ಗೋವಿಂದರಾಜು, ಕಾರ್ಯದರ್ಶಿ ಎಸ್.ಎಚ್.ವೆಂಕಟೇಶ್, ನರಸಿಂಹರಾಜು, ಸದಸ್ಯರಾದ ಹನುಮಂತರಾಜು, ಕುಮಾರ್, ಚಂದ್ರಶೇಖರ್ ಮತ್ತಿತರರು ಇದ್ದರು.