ಜಿಲ್ಲೆ

ಅಹಿಂದ ಭೂಷಣ ಪ್ರಶಸ್ತಿ ಪ್ರದಾನ

ಸುನಿಲ್ ಪೊನ್ನೇಟಿ

ಮಡಿಕೇರಿ:

ಅಹಿಂದ ಒಕ್ಕೂಟದ ಸ್ಥಾಪಕರು ಹಾಗೂ ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ. ರಮೇಶ್ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಈಚೆಗೆ ಅಹಿಂದ ಭೂಷಣ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿತು. ದಲಿತ ಸಂಘರ್ಷ ಸಮಿತಿಯ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ, ಸಾಮಾಜಿಕ ಕಳಕಳಿಯೊಂದಿಗೆ ಸಾಮರಸ್ಯ ಮತ್ತು ಒಗ್ಗಟ್ಟಿನ ಜೀವನಕ್ಕಾಗಿ ಅಹಿಂದ ಒಕ್ಕೂಟವನ್ನು ಸ್ಥಾಪಿಸಿದ ಟಿ.ಪಿ. ರಮೇಶ್ ಅವರು ನಂತರದ ದಿನಗಳಲ್ಲಿ ರೂಪಿಸಿದ ಹೋರಾಟ ಶ್ಲಾಘನೀಯ ಎಂರು.

ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಪ್ರಮುಖರಾದ ಮೋಹನ್ ಮೌರ್ಯ ಮತ್ತಿತರರು ಇದ್ದರು.