ಜಿಲ್ಲೆ

ಅಕ್ರಮವಾಗಿ ಮರಳು ತೆಗೆಯುತ್ತಿದ್ದ 12 ತೆಪ್ಪ, ಮರಳು ವಶ

Haveri

ರಾಣೆಬೆನ್ನೂರ: ತಾಲೂಕಿನ ಹೀಲದಹಳ್ಳಿ ಹಾಗೂ ಬೇಲೂರು ಗ್ರಾಮದ ಬಳಿ ತುಂಗಭದ್ರಾ ನದಿಪಾತ್ರದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ 12 ತೆಪ್ಪಗಳನ್ನು ಹಾಗೂ 12 ಕ್ಯೂಬಿಕ್ ಮೀಟರ್ ಮರಳನ್ನು ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಭಾನುವಾರ ವಶಪಡಿಸಿಕೊಂಡಿದ್ದಾರೆ.
ಹೀಲದಹಳ್ಳಿ ಹಾಗೂ ಬೇಲೂರು ಗ್ರಾಮದ ಬಳಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ತೆಪ್ಪ ಹಾಗೂ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.