ಜಿಲ್ಲೆ

ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು

Haveri - Kariyappa Aralikatti

ರಾಣೆಬೆನ್ನೂರ: ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಮೃತಪಟ್ಟ ಘಟನೆ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿ ಗುರುವಾರ ನಡೆದಿದೆ.
ಗ್ರಾಮದ ಹಾಲಪ್ಪ ಶಿವಮೂರ್ತೆಪ್ಪ ಕಾಯಕದ (45) ಮೃತ ಬೈಕ್ ಸವಾರ.
ಈತ ರಾಣೆಬೆನ್ನೂರ ಕಡೆಯಿಂದ ಗೋಡಿಹಾಳಕ್ಕೆ ತೆರಳುತ್ತಿದ್ದ ಸಮಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.