ಜಿಲ್ಲೆ

ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನೂಕಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮಂಜು ಭೂಕಾಂತಪ್ಪ ಪೂಜಾರ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಈತ ವ್ಯಾಪಾರಕ್ಕಾಗಿ ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲಾಗದೆ ಜೀವನದಲ್ಲಿ ಜುಗುಪ್ಸೆ ಹೊಂದಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.