ಜಿಲ್ಲೆ

ಲಾರಿ ಡಿಕ್ಕಿಯಾಗಿ ಪಾದಚಾರಿ ಸಾವು

Haveri - Kariyappa Aralikatti

ರಾಣೆಬೆನ್ನೂರ: ಲಾರಿ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಗರದ ಹಳೇ ಪಿ.ಬಿ. ರಸ್ತೆ ಬಳಿ ಮಂಗಳವಾರ ನಡೆದಿದೆ.

ನಗರದ ಕಾಟಿಗಲ್ಲಿಯ ಭರಮಪ್ಪ ಮಲ್ಲಪ್ಪ ತೊಣ್ಣೇರ (66) ಮೃತ ವ್ಯಕ್ತಿ.

ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಲಾರಿ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಅವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.