ಜಿಲ್ಲೆ

ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ರಾಣೆಬೆನ್ನೂರ: ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾಗೋಡ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ಚಂದ್ರಪ್ಪ ಭೀಮಪ್ಪ ಮುದಿಗೌಡ್ರ (56) ಮೃತ ರೈತ.
ಈತ 1.20 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್‌ನಲ್ಲಿ 50 ಸಾವಿರ ರೂ. ಹಾಗೂ ಕೈಗಡವಾಗಿ 1 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗಿದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.