ಜಿಲ್ಲೆ

ಮೂತ್ರಪಿಂಡ ಸಮಸ್ಯೆ ಎದುರಿಸುತ್ತಿದ್ದ ಯುವತಿ ನೇಣಿಗೆ ಶರಣು

Haveri - Kariyappa Aralikatti

ರಾಣೆಬೆನ್ನೂರ: ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನದಿಹರಳಹಳ್ಳಿಯಲ್ಲಿ ಸೋಮವಾರ ಸಂಭವಿಸಿದೆ.
ಕಾವ್ಯಾ ಕರಬಸನಗೌಡ ಪಾಟೀಲ (19) ಮೃತ ಯುವತಿ.
ಈಕೆೆ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದಳು. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.