ಜಿಲ್ಲೆ

ಪೊಳಲಿ ದೇವಾಲಯದಲ್ಲಿ ದೊಡ್ಡ ರಂಗಪೂಜೆ

Manikya M

ಬಂಟ್ವಾಳ: ಐತಿಹಾಸಿಕ ಹಿನ್ನೆಲೆಯ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸೇವಾರೂಪದ ದೊಡ್ಡ ರಂಗಪೂಜೆ ಉತ್ಸವವು ಗುರುವಾರ ಸಂಪನ್ನಗೊಂಡಿತು.

ಪೊಳಲಿ ಶ್ರೀಕೃಷ್ಣ ತಂತ್ರಿ ನೇತೃತ್ವದಲ್ಲಿ ಕ್ಷೇತ್ರದ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಪರಮೇಶ್ವರ ಭಟ್ ಮತ್ತು ರಾಮ್ ಭಟ್ ಮತ್ತಿತರರ ಪೌರೋಹಿತ್ಯದಲ್ಲಿ ಬೆಳಗ್ಗೆ ಗಣಪತಿಹೋಮ, ಕಲಶಪೂಜೆ, ಪ್ರಧಾನ ಹೋಮ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು.

ಸಂಜೆ ಮಹಾಪೂಜೆಯ ಬಳಿಕ ದೊಡ್ಡ ರಂಗೋತ್ಸವ, ವಿಶೇಷವಾಗಿ ದೇವರ ಬಲಿ ಉತ್ಸವ, ಬೆಳ್ಳಿರಥೋತ್ಸವ, ಚಂದ್ರಮಂಡಲರಥ, ಸಣ್ಣರಥೋತ್ಸವ, ಪಲ್ಲಕಿ ಉತ್ಸವ ನಡೆಯಿತು.

ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಗೋಪಾಲಶೆಟ್ಟಿ ಮುಂಬೈ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಸಹಿತ ಹಲವಾರು ಗಣ್ಯರು ಆಗಮಿಸಿ ದೇವರ ದರ್ಶನ ಪಡೆದರು. ಶಾಸಕ ರಾಜೇಶ್ ನಾಕ್, ದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.