ಜಿಲ್ಲೆ

ಸಾಹಿತಿ ಲಲಿತಾ ಕೆರಿಮನಿಗೆ ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ

ಲಕ್ಷೆ್ಮೕಶ್ವರ: ಹಿರಿಯ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ದಿ. ಪೊ›.ಸಿ.ವಿ. ಕೆರಿಮನಿ ಅವರ ಧರ್ಮಪತ್ನಿ ಹಿರಿಯ ಮಹಿಳಾ ಸಾಹಿತಿ ಲಲಿತಾ ಸಿ. ಕೆರಿಮನಿ ಅವರಿಗೆ ರಾಣಿ ಚನ್ನಮ್ಮ ಪ್ರಶಸ್ತಿ-2025 ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶನಿವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆ ಲಕ್ಷೆ್ಮೕಶ್ವರದ ಹಿರಿಯ ಮಹಿಳಾ ಸಾಹಿತಿ ಲಲಿತಾ ಸಿ. ಕೆರಿಮನಿ ಅವರಿಗೆ 2025ನೇ ಸಾಲಿನ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಲಲಿತಾ ಕೆರಿಮನಿ ಅವರು ಮೂರು ದಶಕಗಳಿಗೂ ಅಧಿಕ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಸಮಾಜ ಸೇವೆ, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಸಮಾಜ ಸೇವೆಯಲ್ಲಿಯೂ ವಿಶಿಷ್ಟ ಕಾರ್ಯ ಮಾಡುತ್ತಿದ್ದಾರೆ.

ಶಾಸಕ ಡಾ. ಉದಯ ಗರುಡಾಚಾರ್, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಇಲಾಖೆಯ ಕಾರ್ಯದರ್ಶಿ ಡಾ. ಶಮ್ಲ ಇಕ್ಬಾಲ್, ನಿರ್ದೇಶಕರಾದ ರಾಘವೇಂದ್ರ ಟಿ., ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ, ಇತರರಿದ್ದರು.

ಹಿರಿಯ ಸಾಹಿತಿ ಲಲಿತಾ ಕೆರಿಮನಿಯವರಿಗೆ ರಾಜ್ಯಮಟ್ಟದ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ ಪುರಸ್ಕೃತರಾದ ಹಿನ್ನೆಲೆಯಲ್ಲಿ ಶಾಸಕರು, ಮಾಜಿ ಶಾಸಕರು, ಹಿರಿಯ, ಕಿರಿಯ ಸಾಹಿತಿಗಳು, ಅಭಿಮಾನಿಗಳು, ಅವರ ಶಿಷ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.