ಜಿಲ್ಲೆ

ರಂಜನ್ ಗೌಡ ಹಿಂಜಾವೇ ಸಂಚಾಲಕ

ಸುನಿಲ್ ಪೊನ್ನೇಟಿ

ಮಡಿಕೇರಿ:

ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕರಾಗಿ ರಂಜನ್ ಗೌಡ (ಬೋಜೆಗೌಡ) ಅವರನ್ನು ನೇಮಕ ಮಾಡಲಾಗಿದೆ. ಈಚೆಗೆ ಮಂಗಳೂರಿನಲ್ಲಿ ನಡೆದ ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಬೈಠಕ್‌ನಲ್ಲಿ ಈ ನೇಮಕ ನಡೆದಿದೆ.

ಈ ತನಕ ಹಿಂದು ಜಾಗರಣ ವೇದಿಕೆಯ ಕೊಡಗು ಜಿಲ್ಲೆಯ ಜಿಲ್ಲಾ ಸಂಯೋಜಕರಾಗಿದ್ದ ಕುಕ್ಕೇರ ಅಜಿತ್ ಅವರಿಗೆ ಕರ್ನಾಟಕ ದಕ್ಷಿಣ ಪ್ರಾಂತ ಸಮಿತಿಯ ಕಾರ್ಯಕಾರಿಣಿ ಸದಸ್ಯರಾಗಿ ಜವಾಬ್ದಾರಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.