ಕುಶಾಲನಗರ:
ಕುಶಾಲನಗರ ತಾಲೂಕು ವ್ಯಾಪ್ತಿಯ 7 ಗ್ರಾಮ ಪಂಚಾಯತಿಗೆ ಸಂಬAಧಿಸಿದ ವಿವಿಧ ಸÀರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಂಗಳವಾರ ಉಚಿತವಾಗಿ ಸ್ವೆಟರ್‌ಗಳನ್ನು ವಿತರಣೆ ಮಾಡಿದರು. ಕೂಡಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತಾನಾಡಿದ ಅಪ್ಪಚ್ಚು ರಂಜನ್, ಈಗಾಗಲೇ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚು ಸ್ವೆಟರ್‌ಗಳನ್ನು ವಿತರಣೆ ಮಾಡುವ ಗುರಿಹೊಂದಿದ್ದು, ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ವಿತರಣೆ ಮಾಡಲಾಗಿದೆ. ವಿರಾಜಪೇಟೆ ತಾಲೂಕಿನಲ್ಲಿಯೂ ವಿತರಣೆ ಮಾಡಲಾಗುವುದು.
ಸÀರ್ಕಾರಿ ಶಾಲಾ ವಿದ್ಯಾರ್ಥಿಗಳು ಹೆಚ್ಚು ಬಡತನ ರೇಖೆಯಲ್ಲಿರುವ ವಿದ್ಯಾರ್ಥಿಗಳೇಅಗಿರುತ್ತಾರೆ. ಅವರುಗಳ ಆರೋಗ್ಯ ಹಿತದೃಷ್ಟಿಯಿಂದ ಸಣ್ಣ ಪ್ರಮಾಣದ ಸೇವೆಯನ್ನು ಮಾಡಲಾಗುತ್ತಿದೆ. ಸÀರ್ಕಾರಿ ಶಾಲಾ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಿ, ವಿದ್ಯಾವಂತರಾಗಿ ತಮ್ಮ ಬದುಕನ್ನು ಹಸನಗೊಳಿಸಿಕೊಳ್ಳುವ ಮೂಲಕ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ಮುಂದೆ ಬರಬೇಕು. ಉದ್ಯೋಗ ಮೂಲಕ ಗಳಿಸುವುದರಲ್ಲಿ ಸ್ವಲ್ಪ ಹಣವನ್ನು ಸಮಾಜದ ಒಳಿತಿಗೆ ನೀಡುವಂತಾಗಬೇಕು ಎಂದರು.
ಶಿರಂಗಾಲ, ತೊರೆನೂರು, ಹೆಬ್ಬಾಲೆ, ಕೂಡುಮಂಗಳೂರು, ಕೂಡಿಗೆ, ಮುಳ್ಳುಸೋಗೆ, ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾವಿರಾರು ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ ಮಾಡಲಾಯಿತು.
ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ. ಗಿರೀಶ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್, ಮಾಜಿ ಅಧ್ಯಕ್ಷ ಕೆ.ಕೆ. ಭೋಗಪ್ಪ, ಇಂದಿರಾ ರಮೇಶ್, ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ ಪ್ರಕಾಶ್, ಉಪಾಧ್ಯಕ್ಷೆ ರೂಪ ಮಹೇಶ್, ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಅರುಣಾಕುಮಾರಿ, ಕೂಡಿಗೆ ಸದ್ಗುರು ಅಪ್ಪಯ್ಯ ಪ್ರೌಢಶಾಲಾ ವ್ಯವಸ್ಥಾಪಕ ಬೋಸ್ ಮಂದಣ್ಣ, ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಮತ್ತಿತರರು ಇದ್ದರು.