ಜಿಲ್ಲೆ

ಅಪ್ರಾಪ್ತೆ ಪುತ್ರಿಯ ಮೇಲೆ ಅತ್ಯಾಚಾರಗೈದ ತಂದೆಗೆ 15 ವರ್ಷ ಕಠಿಣ ಜೈಲು ಶಿಕ್ಷೆ

reportermng

ಮಂಗಳೂರು: ತಂದೆಯಿಂದಲೇ ಅಪ್ರಾಪ್ತೆ ಪುತ್ರಿಯ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣ ಮಂಗಳೂರಿನ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ತ್ವರಿತ -2) ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 15 ವರ್ಷ ಕಠಿಣ ಜೈಲು ಹಾಗೂ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.


ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ದಾವೂದ್ (55) ಶಿಕ್ಷೆಗೊಳಗಾದ ಅಪರಾಧಿ.


2018 ರ ಜನವರಿ ತಿಂಗಳಿನಲ್ಲಿ ಬಂಟ್ವಾಳ ತಾಲ್ಲೂಕು ಮೆಲ್ಕಾರ್ ಲಾಡ್ಜ್ ಮತ್ತು ಇರಾ ಗ್ರಾಮದಲ್ಲಿ ತಂದೆಯಿಂದಲೇ ಅಪ್ರಾಪ್ತೆ ಮಗಳ ಮೇಲೆ ಅತ್ಯಾಚಾರವಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ವೃತ್ತ ನಿರೀಕ್ಷಕರಾದ ಶರಣಗೌಡ ಹಾಗೂ ಟಿ. ಡಿ. ನಾಗರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ನ್ಯಾಯಾಧೀಶರಾದ ಕೆ.ಎಂ.ರಾಧಾಕೃಷ್ಣ ಅವರು ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ.