ಜಿಲ್ಲೆ

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ, ಇಬ್ಬರಿಗೆ ಕಠಿಣ ಜೈಲು ಶಿಕ್ಷೆ

Rest of Bengaluru - Chikkaballapura - Venkatesh

ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ನ್ಯಾಯಾಲಯವು ಇಬ್ಬರಿಗೆ ತಲಾ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10 ಸಾವಿರ ರೂ ದಂಡವನ್ನು ವಿಧಿಸಿದೆ.

ಚಿಂತಾಮಣಿ ತಾಲೂಕಿನ ಐಮಿರೆಡಿಹಳ್ಳಿಯ ಕಲ್ಯಾಣ ಮತ್ತು ಚಿಕ್ಕಮುನಿಮಂಗಲ ಕೆ.ಸುರೇಶ್ ಶಿಕ್ಷೆಗೊಳಗಾದವರು. ಅಪ್ರಾಪ್ತರ ಮೇಲೆ ಅತ್ಯಾಚಾರ ನಡೆಸಿದಕ್ಕೆ ಸಂಬAಧಿಸಿದAತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಎನ್.ಸವಿತಾ ಕುಮಾರಿ ಇಬ್ಬರಿಗೆ ಶಿಕ್ಷೆ ವಿಧಿಸಿದ್ದಾರೆ.

*ಶಾಲಾ ವಿದ್ಯಾರ್ಥಿನಿ ಅತ್ಯಾಚಾರ

ಕಳೆದ 2017 ರಲ್ಲಿ 4 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಶಾಲೆಯಿಂದ ಮನೆಗೆ ಕರೆ ತರಲು ಸಂತ್ರಸ್ತೆಯ ತಂದೆ ತಿಳಿಸಿದ್ದನ್ನು ಕಲ್ಯಾಣ ದುರುಪಯೋಗಪಡಿಸಿಕೊಂಡಿದ್ದಾನೆ. ಮನೆಯ ಬದಲಿಗೆ ದ್ವಿಚಕ್ರ ವಾಹನದಲ್ಲಿ ಕೆರೆಯಂಗಳಕ್ಕೆ ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ವೃತ್ತ ನಿರೀಕ್ಷಕ ಜೆ.ಎನ್.ಆನಂದ್ ಕುಮಾರ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಸಂತ್ರಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಲಕ್ಷ್ಮೀನರಸಂಹಪ್ಪ ವಾದ ಮಂಡಿಸಿದ್ದರು.

*ಮದುವೆ ನೆಪದಲ್ಲಿ ಅತ್ಯಾಚಾರ

ಕಳೆದ 2021 ನೇ ಸಾಲಿನ ಡಿಸೆಂಬರ್ನಲ್ಲಿ ಮದುವೆಯಾಗುವುದಾಗಿ ನಂಬಿಸಿ, ವಾಸದ ಮನೆಯ ಮೇಲಿರುವ ಮಹಡಿಯ ಕೊಠಡಿಗೆ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ, ಕೆ.ಸುರೇಶ್ ಅತ್ಯಾಚಾರವೆಸಗಿದ್ದಾನೆ. ಇದರಿಂದ ಸಂತ್ರಸ್ಥೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ಪೂರ್ತಿಗೊಳಿಸಿ ಪೊಲೀಸ್ ಇನ್ಸ್ ಪೆಕ್ಟರ್ ವಿಶ್ವಾಸ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಸಂತ್ರಸ್ತೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಅರುಣಸಾಕ್ಷಿ ವಾದ ಮಂಡಿಸಿದ್ದರು.