ಮೈಸೂರು: ನಗರದಲ್ಲಿ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ನಗರದ ಗಾಂಧಿವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವುದು ಖಂಡನೀಯ. ತಕ್ಷಣ ಆರೋಪಿಯನ್ನು ಬಂಧಿಸಿರುವುದು ಸ್ವಾಗತಾರ್ಹ. ಆರೋಪಿಗೆ ನ್ಯಾಯಾಯ ಆದಷ್ಟು ಬೇಗ ಶಿಕ್ಷೆ ಪ್ರಕಟಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು ಎಂದು ವೇದಿಕೆು ರಾಜ್ಯಾಧ್ಯಕ್ಷ ಬಿ.ಬಿ.ರಾಜಶೇಖರ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವೇದಿಕೆ ಪದಾಧಿಕಾರಿಗಳಾದ ಡಿಪಿಕೆ ಪರಮೇಶ್, ನಂಜುಂಡ, ಸಂತೋಷ್, ಮಂಜುಳ, ಸಿಂಧುವಳ್ಳಿ ಶಿವಕುವಾರ್, ಮನುಗೌಡ, ಸೋಮಶೇಖರ, ಗೌತಮ್, ಅನುರಾಜ್ ಗೌಡ, ಮಂಜುನಾಥ್, ಸಿದ್ದೇಗೌಡ ಹಾಗೂ ಇತರರು ಪಾಲ್ಗೊಂಡಿದ್ದರು.