ಜಿಲ್ಲೆ

ರಾಷ್ಟ್ರೀಯ ಲೋಕ ಅದಾಲತ್ ಡಿ.9ರಂದು

ಕೃಷ್ಣ ಕುಲಕರ್ಣಿ

ಆಳಂದ: ವರ್ಷಾನುಗಟ್ಟಲೇ ಕೋರ್ಟ್ನಲ್ಲಿಯೇ ಉಳಿದ ಹಲವು ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಗೊಳಿಸುವುದಕ್ಕಾಗಿ ಡಿ.9ರಂದು ತಾಲೂಕು ಕೋರ್ಟ್ ಆವರಣದಲ್ಲಿ ರಾಷ್ಟಿçÃಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಎಸ್.ಎಂ.ಅರುಟಗಿ ಹೇಳಿದರು.

ಜೆಎಂಎಫ್‌ಸಿ ನ್ಯಾಯಾಲಯದ ಸಭಾಂಗಣದಲ್ಲಿ ರಾಷ್ಟಿçÃಯ ಲೋಕ ಅದಾಲತ್ ನಿಮಿತ್ತ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ಯಾಂಕ್ ವಸೂಲಾತಿ, ಅಪಘಾತ ಪರಿಹಾರ, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂ ಸ್ವಾಧೀನ, ರಾಜಿಯಾಗಬಲ್ಲ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣ ಇತ್ಯರ್ಥಗೊಳಿಸಲು ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಸಮಿತಿ ಕಾರ್ಯದರ್ಶಿ ಯಲ್ಲಪ್ಪ ಕಲ್ಲಾಪುರ ಮಾತನಾಡಿದರು. ತಹಸೀಲ್ದಾರ್ ಯಲ್ಲಪ್ಪ ಸುಬೇದಾರ್, ಸಿಪಿಐ ಪ್ರಕಾಶ ಯಾತನೂರ, ಪಿಎಸ್‌ಐ ಮಹಾದೇವಪ್ಪ ಪಂಚಮುಖಿ, ಸಹಾಯಕ ಸರ್ಕಾರಿ ಅಭಿಯೋಜಕ ಇಸ್ಮಾಯಿಲ್ ಪಟೇಲ್, ಪ್ರಮುಖರಾದ ಜ್ಯೋತಿ ಬಂದಿ, ಕಮಲಾಕರ ರಾಠೋಡ್, ಪರಿತೋಷ, ಬಿ.ಎ.ದೇಶಪಾಂಡೆ, ಮಹಾದೇವ ಹತ್ತಿ, ಬಿ.ಜಿ.ಬೀಳಗಿ, ಭೋಜರಾಜ ನಿಂಬರ್ಗಿ ಇತರರಿದ್ದರು.