ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜು. 13ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.
ನ್ಯಾಯಾಲಯದಲ್ಲಿ ಬಾಕಿ ಇರುವ, ರಾಜಿ ಆಗಬಹುದಾದ ಸಿವಿಲ್ ವ್ಯಾಜ್ಯ, ಮೋಟಾರ ವಾಹನ ಅಪಘಾತ ಪರಿಹಾರ, ಭೂ ಸ್ವಾಧಿನ, ವಿದ್ಯುತ್ ಮಂಡಳಿ, ಇತರ ಸ್ಥಳಿಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕ್, ಖಾಸಗಿ ವ್ಯಕ್ತಿಗಳ ನಡುವಿನ ಚೆಕ್ ಅಮಾನ್ಯ, ಹಣ ವಸೂಲಾತಿ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳು, ವೈವಾಹಿಕ ಪ್ರಕರಣಗಳು (ವಿವಾಹ ವಿಚ್ಛೇದನ ಹೊರತುಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಾನೂನಿನಲ್ಲಿ ರಾಜಿ ಆಗಬಹುದಾದ ಎಲ್ಲ್ಲ ತರಹದ ಕ್ರಿಮಿನಲ್ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಸಿವಿಲ್ ವ್ಯಾಜ್ಯಗಳಲ್ಲಿ ಪಕ್ಷಗಾರರು ಲೋಕ ಅದಾಲತ್ನಲ್ಲಿ ರಾಜಿಯಾದರೆ ಪಕ್ಷಗಾರರು ಸರ್ಕಾರಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ವಾಪಸ್ಸು ಕೊಡಲು ಅವಕಾಶವಿದೆ. ಲೋಕ ಅದಾಲತ್ನಲ್ಲಿ ಉಭಯ ಪಕ್ಷಗಾರರು ಪರಸ್ಪರ ಒಪ್ಪಿದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ತಿಳಿಸಿದ್ದಾರೆ.