ಜಿಲ್ಲೆ

ರಥಯಾತ್ರೆ ಆಗಮನ ನಾಳೆ

Dharwada - Vikram Nadiger

ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿರುವ ಅನುಭವ ಮಂಟಪ ಬಸವಾದಿ ಶರಣರ ವೈಭವ ರಥಯಾತ್ರೆಯು ಏ. 27ರಂದು ಜಿಲ್ಲೆಗೆ ಆಗಮಿಸಲಿದೆ. ಏ. 27ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಲಿದ್ದು, ರಥಾಯಾತ್ರೆ ಸ್ವಾಗತ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು, ಬಸವ ಅಭಿಮಾನಿಗಳು, ಸಮಾಜದ ಪ್ರಮುಖರು, ಸಾರ್ವಜನಿಕರು ಆಗಮಿಸಬೇಕು ಎಂದು ಪ್ರಕಟಣೆ ತಿಳಿಸಿದೆ.