ಮೈಸೂರು: ರಾಘವೇಂದ್ರನಗರದ ಅಭಯದಾಯಕ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ವತಿಯಿಂದ ಸೋಮವಾರ ‘ಶ್ರೀ ಅಭಯಾಂಜನೇಯ’ ಏಕಶಿಲಾ ಮೂರ್ತಿಯ ರಥಯಾತ್ರೆ ನೆರವೇರಿತು.
ಊಟಿ ರಸ್ತೆಯ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಾರ್ಯಸಿದ್ಧಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಆರಂಭಗೊಂಡ ರಥಯಾತ್ರೆ ನಗರದ ನಾನಾ ಭಾಗದಲ್ಲಿ ಸಂಚರಿಸಿ ಅಭಯದಾಯಕ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ ತಲುಪಿತು.
ರಥಯಾತ್ರೆಗೆ ಶ್ರೀ ದತ್ತವಿಜಯಾನಂದತೀರ್ಥ ಸ್ವಾಮೀಜಿ ಚಾಲನೆ ನೀಡಿದರು. ಮೇಯರ್ ಶಿವಕುಮಾರ್, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಮಾರುತಿರಾವ್ ಪವಾರ್, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಸಮಾಜ ಸೇವಕ ಡಾ.ಕೆ.ರಘುರಾಮ್ ವಾಜಪೇಯಿ, ಪಾಲಿಕೆ ಸದಸ್ಯ ಮಂಜುನಾಥ್, ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್‌ಕುಮಾರ್ ಇತರರಿದ್ದರು.