ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಕರೋ ಉತ್ಸವ ಕಾರ್ಯಕ್ರಮವನ್ನು ಬಿಜೆಪಿ ಮುಖಂಡ ಬಸವಲಿಂಗಪ್ಪ ಭೂತೆ ಉದ್ಘಾಟಿಸಿದರು. ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮಹೇಶ ಸಬರದ, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರಪ್ಪ ತೋಟದ, ಶಿಕ್ಷಕರ ಸಂಘದ ತಾಲೂಕ ಘಟಕದ ಅಧ್ಯಕ್ಷ ಮಾರುತಿ ತಳವಾರ, ಮಂಗಳೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವೀಂದ್ರನಾಥ ತೋಟದ, ಗ್ರಾಪಂ ಅಧ್ಯಕ್ಷ ಸಕ್ರಪ್ಪ ಮಂಗಳಪ್ಪ ಚಿನ್ನೂರು, ಉಪಾಧ್ಯಕ್ಷೆ ಅನ್ನಪೂರ್ಣ ಮ್ಯಾಗಳೇಶಿ ಇನ್ನಿತರರಿದ್ದರು. 
ಜಿಲ್ಲೆ

ಕಲೆಗಳ ಉಳಿಸುವ ಕಾರ್ಯವಾಗಲಿ

ಕುಕನೂರು: ಮಕ್ಕಳಲ್ಲಿ ಅಡಗಿರುವ ಕಲೆಯನ್ನು ಹೊರತರಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮಹೇಶ ಸಬರದ ಹೇಳಿದರು.

ಆಧುನಿಕ ಭರಾಟೆಯಿಂದ ಕಲೆಗಳಿಗೆ ಹೊಡೆತ

ತಾಲೂಕಿನ ಮಂಗಳೂರು ಗ್ರಾಮದ ಮಂಗಳೇಶ್ವರ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಕರೋ ಉತ್ಸವ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮಾತನಾಡಿದರು. ನಾಡಿನ ಇತಿಹಾಸ ಸಾರುವ ಕಲೆಗಳು ಆಧುನಿಕ ಭರಾಟೆಯಲ್ಲಿ ನಶಿಸಿ ಹೋಗುತ್ತಿವೆ. ಅವುಗಳನ್ನು ಉಳಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಅತ್ಯಗತ್ಯ ಎಂದರು.

ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರಪ್ಪ ತೋಟದ ಮಾತನಾಡಿದರು. ಬಿಜೆಪಿ ಮುಖಂಡ ಬಸವಲಿಂಗಪ್ಪ ಭೂತೆ ಕಾರ್ಯಕ್ರಮ ಉದ್ಘಾಟಿಸಿದರು. ಸಿಆರ್‌ಪಿ ರವಿ ಮಳಗಿ, ಶಿಕ್ಷಕರ ಸಂಘದ ತಾಲೂಕ ಘಟಕದ ಅಧ್ಯಕ್ಷ ಮಾರುತಿ ತಳವಾರ, ಮಂಗಳೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವೀಂದ್ರನಾಥ ತೋಟದ, ಗ್ರಾಪಂ ಅಧ್ಯಕ್ಷ ಸಕ್ರಪ್ಪ ಮಂಗಳಪ್ಪ ಚಿನ್ನೂರು, ಉಪಾಧ್ಯಕ್ಷೆ ಅನ್ನಪೂರ್ಣ ಮ್ಯಾಗಳೇಶಿ, ಪ್ರಮುಖರಾದ ಚಿನ್ನಪ್ಪ ಶಿರೂರ, ಕೆ.ಬಸವರಾಜ, ವಿಶ್ವನಾಥ ಮರಿಬಸಪ್ಪನವರ, ಡಾ.ಸಿ.ಎಂ.ಹಿರೇಮಠ, ಎ.ಸಿ. ಕಾಲಿಮಿರ್ಚಿ, ಅಶೋಕ ಮಾದಿನೂರು, ಪೀರಸಾಬ್ ದಪೇದಾರ, ಎಂ.ಬಿ.ಅಳವಂಡಿ ಇತರರಿದ್ದರು.