ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸುವಂತೆ ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಡಾ. ಸಾಬಣ್ಣ ತಳವಾರ ಅವರಿಗೆ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಆರ್‌ಸಿಯು ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಬಿ.ಎಂ. ಬಡಿಗೇರ, ಮಹಾದೇವ ಧರಿಗೌಡರ, ಸಚಿನ ಹಿರೇಮಠ ಇದ್ದರು. 
ಜಿಲ್ಲೆ

ಪಡಿತರ ವಿತರಣೆಗೆ ಡಿಸಿ ಸೂಚನೆ

ಬೆಳಗಾವಿ: ಕರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಫಲಾನುಭವಿಗಳಿಗೆ ಅಕ್ಟೋಬರ್ 2020ರ ಮಾಹೆಗೆ ಬಿಡುಗಡೆಯಾದ ಪಡಿತರ ಧಾನ್ಯ ವಿತರಿಸಿಲು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ. ಅಂತ್ಯೋದಯ ಪಡಿತರ ಚೀಟಿ ಎನ್‌ಎಫ್‌ಎಸ್‌ಎ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ, ಪಿಎಂಜಿಕೆಎವೈ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ, ಪಿಎಂಜಿಕೆಎವೈ ಪ್ರತಿ ಪಡಿತರ ಚೀಟಿಗೆ 2 ಕೆ.ಜಿ ಕಡಲೆಕಾಳು ಉಚಿತ ವಿತರಣೆ ಮಾಡಲಾಗುತ್ತದೆ. ಅದೇ ರೀತಿ ಬಿಪಿಎಲ್ ಪಡಿತರ ಚೀಟಿ ಎನ್‌ಎಫ್‌ಎಸ್‌ಎ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ, ಪಿಎಂಜಿಕೆಎವೈ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ, ಎನ್‌ಎ್ಎಸ್‌ಎ ಪ್ರತಿ ಪಡಿತರ ಚೀಟಿಗೆ 2 ಕೆ.ಜಿ ಗೋಧಿ, ಪಿಎಂಜಿಕೆಎವೈ ಪ್ರತಿ ಪಡಿತರ ಚೀಟಿಗೆ 2 ಕೆ.ಜಿ. ಕಡಲೆಕಾಳು ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಎಪಿಎಲ್ ಪಡಿತರರಿಗೆ ಒಪ್ಪಿಗೆ ನೀಡಿದ ಪಡಿತರ ಚೀಟಿಗೆ ಏಕ ಸದಸ್ಯ ಇದ್ದಲ್ಲಿ ಅಕ್ಕಿ 5 ಕೆ.ಜಿ, 2 ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆ.ಜಿ., ಅದೇ ರೀತಿ ಎಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಕೆ.ಜಿ.ಗೆ 15 ರೂ. ದರ ನಿಗದಿಪಡಿಸಲಾಗಿದೆ. ಅಂತರ್ ರಾಜ್ಯ, ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ
ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ರಜೆ ದಿನ ಹೊರತುಪಡಿಸಿ ಪಡಿತರ ವಿತರಣೆಯನ್ನು ತಿಂಗಳ ಪೂರ್ತಿ ಮಾಡುವಂತೆ ನ್ಯಾಯಬೆಲೆ ಅಂಗಡಿಕಾರರಿಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬೆಳಗ್ಗೆ 7ರಿಂದ ರಾತ್ರಿ 9ರ ವರೆಗೆ ಪಡಿತರ ವಿತರಿಸುವಂತೆ ಅವರು ತಿಳಿಸಿದ್ದಾರೆ.