ಜಿಲ್ಲೆ

ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ 4.17 ಲಕ್ಷದ ಅನ್ನಭಾಗ್ಯ ಅಕ್ಕಿ ವಶ

ಸದೇಶ್ ಕಾರ್ಮಾಡ್

ಮೈಸೂರು: ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ ಲಾರಿಯನ್ನು ಮಂಗಳವಾರ ಸಿಸಿಬಿ ಪೊಲೀಸರು ವಶಕ್ಕೆ ಪಡೆದು 4.17 ಲಕ್ಷ ರೂ.ಮೌಲ್ಯದ 250 ಮೂಟೆ ಪಡಿತರ ಅಕ್ಕಿಯನ್ನು ವಶ ಪಡಿಸಿಕೊಂಡಿದ್ದಾರೆ.

ಮೈಸೂರು-ಬೆಂಗಳೂರು ರಸ್ತೆಯ ಸಿದ್ದಲಿಂಗಪುರದ ಬಳಿ ಅಕ್ರಮವಾಗಿ ಲಾರಿಯಲ್ಲಿ ಪಡಿತರ ಸಾಗಾಟ ಮಾಡುತ್ತಿದ್ದ ಸಂದರ್ಭ ಸಿಸಿಬಿ ಎಸಿಪಿ ಸಂದೇಶ್ ಕುಮಾರ್, ಇನ್ಸಪೆಕ್ಟರ್ ಪೂವಯ್ಯ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಅಕ್ಕಿಯನ್ನು ನಗರದಿಂದ ಮಂಡ್ಯದ ಮಿಲ್‌ವೊಂದಕ್ಕೆ ಕೊಂಡೊಯ್ಯಲಾಗುತಿತ್ತು.

ಚಾಲಕ ಸಣ್ಣಪ್ಪನನ್ನು ಬಂಧಿಸಿ ಮೇಟಗಳ್ಳಿ ಠಾಣೆ ಪೊಲೀಸರಿಗೆ ಒಪ್ಪಿಸಲಾಗಿದೆ. ಸ್ಥಳಕ್ಕೆ ಆಹಾರ ನಿರೀಕ್ಷಕ ಕಿರಣ್ ಕುಮಾರ್ ಭೇಟಿ ನೀಡಿದರು. ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.