ಜಿಲ್ಲೆ

ಗ್ರಾಮೀಣ ಭಾಗದ ಅಭಿವೃದ್ಧಿಗೆ ಆದ್ಯತೆ

ಎ. ಆರ್. ರಘುರಾಮ

ರಾವಂದೂರು: ಗ್ರಾಮೀಣ ಭಾಗದ ಅಭಿವೃದ್ಧಿಗೆ ಆದ್ಯತೆಯನ್ನು ನೀಡಲಾಗುವುದು ಎಂದು ಸಚಿವ ಕೆ ವೆಂಕಟೇಶ್ ತಿಳಿಸಿದರು. ಪಿರಿಯಪಟ್ಟಣ ತಾಲೂಕು ಕೆಲ್ಲೂರು ಗ್ರಾಮದಲ್ಲಿ ಮಂಗಳವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಹಂತ ಹಂತವಾಗಿ ಕೆಲ್ಲೂರು ಗ್ರಾಮವನ್ನು ಅಭಿವೃದ್ಧಿಪಡಿಸಲಾಗುವುದು. ಜನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಲಾಗುವುದು. ಅಧಿಕಾರಿಗಳ ಮೂಲಕ ಮಾಹಿತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ಮಾಡಲಾಗುವುದು ಎಂದರು. ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಚಿವರಿಗೆ ಗೌರವಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ. ಸ್ವಾಮಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹೊಲದಪ್ಪ, ಕೆಲ್ಲೂರು ಎ. ನಾಗರಾಜ್, ನಂದೀಶ, ಮಂಜುನಾಥ, ಕೆ ಸಿ ಜಯರಾಮ, ಪುಟ್ಟ ಸೋಮಾರಾಧ್ಯ, ಲಕ್ಕೇಗೌಡ , ನಾಗರಾಜ್, ಮುರುಗೇಂದ್ರ ಆಚಾರ್, ಶಶಿಧರ ಕುಮಾರ್, ತಹಸೀಲ್ದಾರ್ ನಿಸರ್ಗಪ್ರಿಯ, ತಾಲೂಕು ಪಂಚಾಯತಿ ಇಒ ಸುನೀಲ್, ಎಇಇ ವೆಂಕಟೇಶ್, ದಿನೇಶ್ ಮತ್ತಿತರರು ಹಾಜರಿದ್ದರು.