ರಾವಂದೂರು : ರಾಷ್ಟ್ರೀಕೃತ ಬ್ಯಾಂಕುಗಳಿಗಿಂತಲೂ ರೈತರಿಗೆ ಸಹಕಾರ ಬ್ಯಾಂಕುಗಳಲ್ಲಿ ಹೆಚ್ಚು ಅನುಕೂಲವಾಗುವ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲವನ್ನು ನೀಡಲಾಗುತ್ತಿದೆ ಎಂದು ಸಚಿವ ಕೆ ವೆಂಕಟೇಶ ತಿಳಿಸಿದ್ದಾರೆ.
ಬಾರಸೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಆಡಳಿತ ಮಂಡಳಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ ಸಹಕಾರ ಸಂಘದಿಂದ ರೈತರಿಗೆ ಹೆಚ್ಚು ಅನುಕೂಲವಾಗುವ ಸರ್ಕಾರದ ಹಲವಾರು ಯೋಜನೆಗಳನ್ನ ರೂಪಿಸಲಾಗಿದ್ದು ಇದನ್ನು ರೈತರಿಗೆ ನಿಗದಿತ ಸಮಯಕ್ಕೆ ನೀಡುವುದು ಸಂಘದ ಆದ್ಯ ಕರ್ತವ್ಯವಾಗಿದೆ ದಾಖಲೆ ಸಂಘದಿಂದ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸಮಯಕ್ಕೆ ಸರಿಯಾಗಿ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಉತ್ತಮ ಬದುಕಿಗೆ ಎಲ್ಲಾ ನಿರ್ದೇಶಕರ ಸಹಕಾರ ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಂಡಿಸಿಸಿ ಬ್ಯಾಂಕ್, ನಿರ್ದೇಶಕ ಈಚೂರು ಲೋಕೇಶ್ , ಹಿಟ್ನೆ ಹೆಬ್ಬಾಗಿಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀಗೂರುಕುಮಾರ್ ,ನೂತನ ಅಧ್ಯಕ್ಷರಾಗಿ ಬಾವಜಾನ್ ಮತ್ತು ಉಪಾಧ್ಯಕ್ಷರಾಗಿ ಕೆ. ಜೆ.ಮಂಜುನಾಥ್ ಈ.ಪಿ. ಲೋಕೇಶ್ , ನಿರ್ದೇಶಕರಾದ ಬಸವರಾಜು, ಸಿದ್ದರಾಜೇ ಅರಸ್, ಮಹದೇವ, ನಾಗೇಗೌಡ, ಅಮೃತೇಶ್, ಶೋಭಾ, ಭಾಗ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.