ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ಕೊಂಡೊಯ್ಯಲಾಗಿದ್ದು, ಅಂತಿಮ ದರ್ಶನ ಪಡೆಯಲು ಅಭಿಮಾನಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್ ಅವರು ಶುಕ್ರವಾರ ನಸುಕಿನಲ್ಲಿ ಇಹಲೋಕ ತ್ಯಜಿಸಿದರು. ಸಾರ್ವಜಕರಿಗೆ ಮೂರು ಗಂಟೆಗಳ ಕಾಲ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು, ನಂತರ ಮೇಡಿ ಅಗ್ರಹಾರದ ಚಿತಾಗಾರದಲ್ಲಿ ಮಧ್ಯಾಹ್ನ 3.30ಕ್ಕೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ರಾಜೇಶ್ರ ಅಳಿಯ, ನಟ ಅರ್ಜುನ್ ಸರ್ಜಾ ಮಾತನಾಡಿ, ಕನ್ನಡ ಚಿತ್ರರಂಗದಲ್ಲಿ 50ಕ್ಕೂ ಹೆಚ್ಚು ವರ್ಷ ಚಿತ್ರರಂಗದಲ್ಲಿದ್ದವರು. ಡಾ.ರಾಜ್‌ಕುಮಾರ್ ಅವರ ಪಂಕ್ತಿಯವರು. ಆದರಿಂದು ಅವರು ನಮ್ಮನ್ನು ಅಗಲಿದ್ದಾರೆ, ಮನಸ್ಸಿಗೆ ಕಷ್ಟವಾಗ್ತಿದೆ ಎನ್ನುತ್ತಲೇ ಭಾವುಕರಾದರು.