ಜಿಲ್ಲೆ

ಶಿವಕ್ಕನವರಗೆ ರಾಯಣ್ಣ ಪ್ರಶಸ್ತಿ

Dharwada - Basavaraj Idli

ಹುಬ್ಬಳ್ಳಿ: ನಗರದಲ್ಲಿ ಬುಧವಾರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಕುಂದಗೋಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಾ. ಮಂಜುನಾಥ ಶಿವಕ್ಕನವರ ಅವರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಳಗಾವಿ ಸಂಸದ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು. ಸಚಿವ ಸಂತೋಷ ಲಾಡ್ ಉಪಸ್ಥಿತರಿದ್ದರು.

ಹಿತರಕ್ಷಣಾ ಸಮಿತಿಯ ಶಿವಾನಂದ ಮುತ್ತಣ್ಣವರ, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಮಠಾಧೀಶರು ಪಾಲ್ಗೊಂಡಿದ್ದರು.